‘ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿ ಕರ್ನಾಟಕ 6ನೇ ಸ್ಥಾನದಲ್ಲಿದೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಮುಂದಿನ ದಿನಗಳಲ್ಲಿ ಮೊದಲ ಸ್ಥಾನ ಪಡೆಯಬೇಕು’ ಎಂದು ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಉಸ್ತುವಾರಿ ವಹಿಸಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.