ಕಡೆಗೋಲು ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆಮಾಡಿದೆ. ಕೃಷ್ಣಮಠದ ರಥಬೀದಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವಕ್ಕೆ ಸಿಂಗಾರಗೊಂಡು ಕಂಗೊಳಿಸುತ್ತಿದೆ. ಕೃಷ್ಣನ ಲೀಲೋತ್ಸವ ಕಣ್ತುಂಬಿಕೊಳ್ಳಲು ಹೊರ ಜಿಲ್ಲೆಗಳಿಂದ ಭಕ್ತರು ಉಡುಪಿಗೆ ಹರಿದು ಬರುತ್ತಿದ್ದಾರೆ. ಸಂಪ್ರದಾಯದಂತೆ ಕೃಷ್ಣನಿಗೆ ಪ್ರಿಯವಾದ ಚಕ್ಕುಲಿ ಹಾಗೂ ಬಗೆ ಬಗೆಯ ಉಂಡೆಗಳನ್ನು ತಯಾರಿಸಲಾಗಿದೆ.