ಅತ್ಯಂತ ತರಾತುರಿಯಲ್ಲಿ ಹಾಗೂ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕರ್ನಾಟಕ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಹೆಸರಾಂತ ವಿಜ್ಞಾನಿಗಳು ಹಾಗೂ ಶಿಕ್ಷಣ ತಜ್ಞರು ಮುಖ್ಯಮಂತ್ರಿಗಳಿಗೆ, ರಾಜ್ಯದ ಎಲ್ಲ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಬಹಿರಂಗ ಪತ್ರ ಬರೆದಿದ್ದಾರೆ.