ಮುಂದಿನ ಪೀಳಿಗೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುವ ಶಿಕ್ಷಣ ಕ್ಷೇತ್ರಕ್ಕೆ ಭಾರತ ಸರ್ಕಾರ ಜಿಡಿಪಿಯ ಶೇ 6ರಷ್ಟು ಹಣವನ್ನು ಮೀಸಲಿಡಬೇಕು. ಈಗ ಖರ್ಚು ಮಾಡುತ್ತಿರುವ ಶೇ 1.7ರಷ್ಟು ಹಣ ಯಾವುದಕ್ಕೂ ಸಾಕಾಗದು ಎಂದು ಚಿತ್ತಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶರಣಬಸಪ್ಪ ಸೈದಾಪುರ ಅಭಿಪ್ರಾಯಪಟ್ಟರು.