ಐಎಂಎ: ನಿಂಬಾಳ್ಕರ್‌ ವಿರುದ್ಧದ ಎಫ್‌ಐಆರ್‌ ರದ್ದತಿಗೆ 'ಸುಪ್ರೀಂ' ತಡೆ
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಕರ್ನಾಟಕದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.